ಕೀರ್ತನೆಗಳು 129:8
TSK
ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.
TSK
مراجع Treasury of Scripture Knowledge في ಕನ್ನಡ IRV.
ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.
ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.
ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;