TSK

TSK · 2 ಯೋಹಾನನು 1:8

مراجع Treasury of Scripture Knowledge في ಕನ್ನಡ IRV.

العودة إلى المقطع

ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.

‹ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›

¶ ‹“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,›

‹ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.›

‹ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.›

ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು.

¶ ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?

ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.

¶ ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.

ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.