ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.
TSK
TSK · 2 ಅರಸುಗಳು 13:3
مراجع Treasury of Scripture Knowledge في ಕನ್ನಡ IRV.
ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.
ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.
ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು.
¶ ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.
ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.