TSK

TSK · 2 ಅರಸುಗಳು 19:21

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.

ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.

ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.

ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.

ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.

ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.

ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.

ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.

ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.

ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.

¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.