TSK

TSK · 2 ಅರಸುಗಳು 21:11

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.

ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.

ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.

ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.

ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.

“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.

ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.