ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.
TSK
TSK · 2 ಅರಸುಗಳು 21:13
مراجع Treasury of Scripture Knowledge في ಕನ್ನಡ IRV.
ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.
¶ ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.
ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”
¶ ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.
ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.