TSK

TSK · 2 ಅರಸುಗಳು 21:15

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.

¶ ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.

ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.

ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.

¶ “ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು,

¶ “ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.

ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.

ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು

ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.