TSK

TSK · 2 ಅರಸುಗಳು 21:23

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.

ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.

¶ ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.

ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.