ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.
TSK
TSK · 2 ಅರಸುಗಳು 6:21
مراجع Treasury of Scripture Knowledge في ಕನ್ನಡ IRV.
ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.
¶ ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು.
¶ ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.
ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.