TSK

TSK · 2 ಅರಸುಗಳು 9:13

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.

ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.

ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.

ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.

ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು.

ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.