¶ ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.
TSK
TSK · 2 ಪೇತ್ರನು 1:21
مراجع Treasury of Scripture Knowledge في ಕನ್ನಡ IRV.
¶ ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.
¶ ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು
ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು.
ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.
¶ ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.
ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು.
ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.
ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ,
ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.
ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.
ಈ ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.