ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು.
TSK
TSK · 2 ಪೇತ್ರನು 1:5
مراجع Treasury of Scripture Knowledge في ಕನ್ನಡ IRV.
ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”
ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ.
ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.
ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
¶ ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
¶ ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.
ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.
¶ ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.