TSK

TSK · 2 ಪೇತ್ರನು 2:4

مراجع Treasury of Scripture Knowledge في ಕನ್ನಡ IRV.

العودة إلى المقطع

ಆಹಾ, ಆತನು ತನ್ನ ಸೇವಕರಲ್ಲಿಯೂ ನಂಬಿಕೆಯನ್ನಿಡುವುದಿಲ್ಲ, ತನ್ನ ದೂತರ ಮೇಲೆ ತಪ್ಪುಹೊರಿಸುತ್ತಾನೆ.

ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.

ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.

‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›

ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.

‹ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.›

ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.

ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.

ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.

ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.

¶ ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.