TSK

TSK · 2 ಪೇತ್ರನು 3:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.

ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!

ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,

ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.

ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.

ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.