TSK

TSK · 2 ಸಮುವೇಲನು 1:22

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.

¶ ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.

ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.

ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.