TSK

TSK · 2 ಸಮುವೇಲನು 1:8

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.

ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”

ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.

¶ ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,

ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.