¶ ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
TSK
TSK · 2 ಸಮುವೇಲನು 11:2
مراجع Treasury of Scripture Knowledge في ಕನ್ನಡ IRV.
ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;
¶ ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.
¶ ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.
¶ ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.
¶ ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.
“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,
ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.
ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
‹ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.›
ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, ‹“ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?›
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.