TSK

TSK · 2 ಸಮುವೇಲನು 13:28

مراجع Treasury of Scripture Knowledge في ಕನ್ನಡ IRV.

العودة إلى المقطع

ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.

ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು.

ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.

ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.

ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು.

ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.

ಅದಕ್ಕೆ ಸೌಲನು, “ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ” ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.

ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.

ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.

ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.

ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.

ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.

ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.

¶ ‹“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.›