TSK

TSK · 2 ಸಮುವೇಲನು 14:3

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.

ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.

ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.

ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;