TSK

TSK · 2 ಸಮುವೇಲನು 14:7

مراجع Treasury of Scripture Knowledge في ಕನ್ನಡ IRV.

العودة إلى المقطع

ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.

ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.

ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ.

‹ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು›