¶ ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
TSK
TSK · 2 ಸಮುವೇಲನು 18:2
مراجع Treasury of Scripture Knowledge في ಕನ್ನಡ IRV.
ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.
ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು.
ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
¶ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.
ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.
ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?