TSK

TSK · 2 ಸಮುವೇಲನು 18:9

مراجع Treasury of Scripture Knowledge في ಕನ್ನಡ IRV.

العودة إلى المقطع

ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.

¶ “ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.

ನನ್ನ ಜೀವಕ್ಕೆ ಕೇಡು ಬಗೆಯುವವರೋ, ಅಧೋಲೋಕಕ್ಕೆ ಇಳಿದುಹೋಗುವರು.

ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.

ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.

¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.