TSK

TSK · 2 ಸಮುವೇಲನು 19:37

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು.

¶ ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.

ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.

ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.

ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು.

“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.

ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.