TSK

TSK · 2 ಸಮುವೇಲನು 21:7

مراجع Treasury of Scripture Knowledge في ಕನ್ನಡ IRV.

العودة إلى المقطع

ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.

ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ.

ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.

ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.

¶ ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,

¶ ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.

ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.