ವಿಮೋಚನಕಾಂಡ 20:21
TSK
ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.
TSK
مراجع Treasury of Scripture Knowledge في ಕನ್ನಡ IRV.
ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.
¶ ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.
ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.
ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.
ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.
¶ ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.