TSK

TSK · 2 ಸಮುವೇಲನು 22:11

مراجع Treasury of Scripture Knowledge في ಕನ್ನಡ IRV.

العودة إلى المقطع

ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು.

ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.

ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.

ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.

¶ ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು.

¶ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?