¶ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
TSK
TSK · 2 ಸಮುವೇಲನು 22:3
مراجع Treasury of Scripture Knowledge في ಕನ್ನಡ IRV.
ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?
¶ ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.
ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ
ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.
ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.
ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.
ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.
ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.
¶ ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.
ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
“ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ.