ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.
TSK
TSK · 2 ಸಮುವೇಲನು 22:7
مراجع Treasury of Scripture Knowledge في ಕನ್ನಡ IRV.
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.
‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’
ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”
ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.