TSK

TSK · 2 ಸಮುವೇಲನು 22:8

مراجع Treasury of Scripture Knowledge في ಕನ್ನಡ IRV.

العودة إلى المقطع

ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.”

ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.

ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.

ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.

ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;

ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.