TSK

TSK · 2 ಸಮುವೇಲನು 23:9

مراجع Treasury of Scripture Knowledge في ಕನ್ನಡ IRV.

العودة إلى المقطع

ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು.

ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.

ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.

ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.

ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.