¶ ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
TSK
TSK · 2 ಸಮುವೇಲನು 3:29
مراجع Treasury of Scripture Knowledge في ಕನ್ನಡ IRV.
“ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.
ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.
ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೋಡುವಿ. ಇಸ್ರಾಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಪೂರ್ಣಾಯುಷ್ಯವನ್ನು ಹೊಂದಿ ಜೀವಿಸುವವರು ಇನ್ನು ಮುಂದೆ ಒಬ್ಬರಾದರು ಇರುವುದಿಲ್ಲ.
ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.
ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.
ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.
ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.
ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.