ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.
TSK
TSK · 2 ಸಮುವೇಲನು 3:9
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.
¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ. ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.
ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.
ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.
¶ ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ;
ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.
ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,