TSK

TSK · 2 ಸಮುವೇಲನು 4:8

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.

ಆದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು.

¶ ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು,

ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.

¶ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.

ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.

ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು.

‹ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?›

ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.