TSK

TSK · 2 ಸಮುವೇಲನು 5:3

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.

ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.

¶ ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.

ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.

ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.

¶ ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.