¶ ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.
TSK
TSK · 2 ಸಮುವೇಲನು 5:7
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು.
¶ ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.
¶ ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.
¶ ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೆಲ್ಲರನ್ನು, ಕುಲಾಧಿಪತಿಗಳೆಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು.
¶ ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.
ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.
ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.
ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.
¶ ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,