TSK

TSK · 2 ಸಮುವೇಲನು 6:23

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.

ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.

ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.

“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.