TSK

TSK · 2 ಸಮುವೇಲನು 6:5

مراجع Treasury of Scripture Knowledge في ಕನ್ನಡ IRV.

العودة إلى المقطع

ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು.

ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.

ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು.

ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.

ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.

ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.

¶ “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.

ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ.