ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.
TSK
TSK · 2 ಸಮುವೇಲನು 7:11
مراجع Treasury of Scripture Knowledge في ಕನ್ನಡ IRV.
ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.
¶ ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.
ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.
ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.
ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.
ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.
ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.
ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.