TSK

TSK · 2 ಸಮುವೇಲನು 7:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.

¶ ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.

¶ “ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,

¶ ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.

¶ ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.

¶ “ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.

¶ ‹“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ,›‹ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು›‹ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,›