¶ ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
TSK
TSK · 2 ಸಮುವೇಲನು 7:8
مراجع Treasury of Scripture Knowledge في ಕನ್ನಡ IRV.
ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.
¶ ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.
¶ ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.
ಯೆಹೋವನು ನನ್ನನ್ನು ಮಂದೆ ಕಾಯುವವರಿಂದ ತಪ್ಪಿಸಿ, ‘ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು’ ಎಂದು ನನಗೆ ಅಪ್ಪಣೆ ಕೊಟ್ಟನು.