¶ ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.
TSK
TSK · 2 ಸಮುವೇಲನು 8:14
مراجع Treasury of Scripture Knowledge في ಕನ್ನಡ IRV.
¶ ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು.
ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.
ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.
ದಾವೀದನಿಗೂ ಎದೋಮಿನವರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ, ಹತರಾದ ಇಸ್ರಾಯೇಲರನ್ನು ಸಮಾಧಿಮಾಡಿದನು.
ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.
ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.
ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.
ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.