TSK

TSK · 2 ಸಮುವೇಲನು 8:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.

ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.

¶ ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು

ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.

ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.

ದಾವೀದನು ಚೋಬದವರನ್ನು ಸಂಹರಿಸಿದಾಗ ಅವನು ಚೋಬದ ಅರಸನೂ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಜನರನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.

ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.