TSK

TSK · 2 ಸಮುವೇಲನು 9:6

مراجع Treasury of Scripture Knowledge في ಕನ್ನಡ IRV.

العودة إلى المقطع

ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.

ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.

¶ ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.

ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.