TSK

TSK · 2 ತಿಮೊಥೆಯನಿಗೆ 1:13

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.

ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.

ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.

ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,

ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.

ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.

ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.

¶ ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.

ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.

ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.

‹ಆದರೆ›‹ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.›

‹ನಾನು›‹ಬೇಗನೇ ಬರುತ್ತೇನೆ,›‹ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.›