TSK

TSK · 2 ತಿಮೊಥೆಯನಿಗೆ 2:18

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಆತನು ‹“ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.›

‹ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.›

ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.

¶ ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?

ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.

ಕೆಲವರು ಆ ಸುಳ್ಳಾದ ಜ್ಞಾನವನ್ನು ಒಪ್ಪಿಕೊಂಡು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗಿ ಹೋದರು. ಕೃಪೆಯು ನಿಮ್ಮೊಂದಿಗಿರಲಿ.

ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.

ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.