TSK

TSK · 2 ತಿಮೊಥೆಯನಿಗೆ 4:1

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ

ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.

¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›

‹ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.›

‹ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.›

ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.

ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.

ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ.

ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.

ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.

ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ,

ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.

ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,

ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು.

ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.

ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.

¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.