TSK

TSK · 2 ತಿಮೊಥೆಯನಿಗೆ 4:10

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.

‹ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.›

‹ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.›

ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.

¶ ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.

ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.

ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.

ತೀತನು ಪ್ರಾರಂಭಿಸಿದ ಹಾಗೆಯೇ ಧರ್ಮಕಾರ್ಯವನ್ನು ಪೂರೈಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.

ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,

ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ.

ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.

¶ ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.

ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.

ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.

ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.