ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.
TSK
TSK · 2 ತಿಮೊಥೆಯನಿಗೆ 4:17
مراجع Treasury of Scripture Knowledge في ಕನ್ನಡ IRV.
ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.
ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.
ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.
ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.
‹ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.›
ಕರ್ತನು ಅವನಿಗೆ, ‹“ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.›
¶ ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; ‹“ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು”› ಅಂದನು.
ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;
ಅದಕ್ಕಾತನು, ‹“ನನ್ನ ಕೃಪೆಯೇ ನಿನಗೆ ಸಾಕು,›‹ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ”› ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.
¶ ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.
ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.