ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.
TSK
TSK · ಅಪೊಸ್ತಲರ ಕೃತ್ಯಗ 1:24
مراجع Treasury of Scripture Knowledge في ಕನ್ನಡ IRV.
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.
ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.
ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,
ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.
ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.
‹ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ›‹ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.›‹ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.›