TSK

TSK · ಅಪೊಸ್ತಲರ ಕೃತ್ಯಗ 1:4

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.

‹ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?”› ಅಂದನು.

ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, ‹“ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?”› ಎಂದು ಅವರನ್ನು ಕೇಳಲು,

ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.

‹ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.›

‹ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ›‹ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.›

ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.